ಆಕೆ ಅವನ ಬಳಿ ತುಟಿ ಬಿಚ್ಚಿ ಮಾತನಾಡದಿದ್ದರೂ, ಕಣ್ಣಿನ ಮಾತುಗಳು ಸಾವಿರ ಪದಗಳನ್ನು ಮೀರಿಸಿದ್ದವು. ಪ್ರೀತಿಯ ದ್ಯೋತಕವಾಗಿ ಮಳ್ಳಿಗೆಯ ಬಳ್ಳಿಯನ್ನು ಆಕೆಗೆ ನೀಡಿ ಬೇಗ ಬರುವೆನೆಂದು ತಿಳಿಸಿ ಊರಿಗೆ ಮರಳಿದ. ಆಕೆ ಅದನ್ನು ಜೋಪಾನವಾಗಿ ಬೆಳೆಸಿದಳು. ಬಳ್ಳಿ ಮಾವಿನ ಮರದ ಆಸರೆಯಲ್ಲಿ ವಿಸ್ತಾರವಾಗಿ ಬೆಳೆಯಿತು.
ಮೊಗ್ಗಾಯಿತು....ಹೂವಾಯಿತು.....ಬಾಡಿತು. ಆತನ ಸುಳಿವಿಲ್ಲ. ಅವನ ನೆನಪು ಮಾಸದಾದಾಗ ಅಕ್ಕನ ಕಂದನಿಗೆ ಆಸರೆಯಾದಳು. ಆ ಕಂದನ ಕಣ್ಣಲ್ಲಿ ಅವನ ಬಿಂಬ ಕಾಣುತ್ತಿದ್ದಳು. ಕಾಯುತ್ತಿದ್ದಳು. ಕೊನೆಗೂ ಆತ ಬಂದನೇ ಬಂದ. ಮಲ್ಲಿಗೆಯ ಬಳ್ಳಿ ಬಾಡಿತ್ತು. ಅದರ ಹಿಂದೆ ನಿಂತು ದಿಟ್ಟಿಸಿದ. ಇವಳ ಮಡಿಲಲ್ಲಿ ಕಿಲಕಿಲ ನಗುತ್ತಿತ್ತು ಮುದ್ದುಕಂದ. ಆತನ ಪ್ರೀತಿಯ ಕುಸುಮ ಅರಳುವ ಮೊದಲೇ ಬಾಡಿತ್ತು..ಬಂದ ದಾರಿಯಲ್ಲೇ ಹಿಂತಿರುಗಿದ. ಮಲ್ಲಿಗೆ ಬಳ್ಳಿಯ ಆಸರೆ ಕೊಂಡಿ ಕಳಚಿ ಬಿತ್ತು. ಪುನ ಆಕೆ ಅವನಿಗಾಗಿ ಅಲ್ಲೇ ಕಾದಳು.
1 comment:
ಪ್ರೀತು ಸರ್, ಜೀವನದಲ್ಲಿ ಎಷ್ಟೋ ಸಂಬಧಗಳು ಮೌನದಿಂದಲೇ ಮುರಿದುಬಿಳುತ್ತವೆ. ಅಂತಹ ಕ್ಷಣ ನಾವು ಮೌನವನ್ನು ಮುರಿದು ಮಾತನಾಡಬೇಕು ಎನ್ನುವುದು ನಿಮ್ಮ ಬರಹದಿಂದ ತಿಳಿಯುತ್ತದೆ...
Post a Comment